ಕರ್ನಾಟಕ

karnataka

ETV Bharat / state

ಹೆದ್ದಾರಿ ದುರಸ್ತಿಗೆ ಆಗ್ರಹ: ಹೊಂಡದಲ್ಲಿ ಭತ್ತ ನಾಟಿ ಮಾಡಿ ವಿಭಿನ್ನ ಪ್ರತಿಭಟನೆ

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಬಳಿ ಹಾದು ಹೋಗುವ ರಾಜ್ಯ ಹೆದ್ದಾರಿ 26ರ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಭತ್ತ ನಾಟಿ ಮಾಡಿ ವಿಭಿನ್ನ ಪ್ರತಿಭಟನೆ
ಭತ್ತ ನಾಟಿ ಮಾಡಿ ವಿಭಿನ್ನ ಪ್ರತಿಭಟನೆ

By

Published : Aug 12, 2020, 7:39 AM IST

ಹಾವೇರಿ: ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ರಟ್ಟೀಹಳ್ಳಿ ತಾಲೂಕಿನ ಹಳ್ಳೂರು ಗ್ರಾಮಸ್ಥರು ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ್ದಾರೆ.

ಭತ್ತ ನಾಟಿ ಮಾಡಿ ವಿಭಿನ್ನ ಪ್ರತಿಭಟನೆ

ರಾಜ್ಯ ಹೆದ್ದಾರಿ 26ರ ರಸ್ತೆ ಹೊಂಡದಂತಾಗಿದ್ದು, ಅದರ ಮೇಲೆ ಭತ್ತ ನಾಟಿ ಮಾಡುವ ಮೂಲಕ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರಸ್ತೆ ಸುಮಾರು 30 ವರ್ಷಗಳಿಂದ ದುರಸ್ತಿ ಭಾಗ್ಯ ಕಂಡಿಲ್ಲ. ಇಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಈ ಕುರಿತಂತೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸುವ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ರಸ್ತೆ ದುರಸ್ತಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ABOUT THE AUTHOR

...view details