ಕರ್ನಾಟಕ

karnataka

ETV Bharat / state

ರಾಣೆಬೆನ್ನೂರು: ಎಸ್ಎಸ್ಎಲ್​​ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ - ಎಸ್.ಎಸ್.ಎಲ್. ಸಿ ಪರೀಕ್ಷೆ ಸುದ್ದಿ

ತಾಲೂಕಿನಲ್ಲಿ ಶಿಕ್ಷಣ ಇಲಾಖೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಜೂ.25 ರಂದು ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ.

ಎಸ್ಎಸ್ಎಲ್​​ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ದತೆ
ಎಸ್ಎಸ್ಎಲ್​​ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ದತೆ

By

Published : Jun 23, 2020, 2:03 PM IST

ರಾಣೆಬೆನ್ನೂರು: ತಾಲೂಕಿನಲ್ಲಿ ಕೊರೊನಾ ಭಯದ ನಡುವೆ ಎಸ್ಎಸ್ಎಲ್​​ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆ ನಡೆಸಿದೆ.

ತಾಲೂಕಿನಲ್ಲಿ ಶಿಕ್ಷಣ ಇಲಾಖೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಜೂನ್​ 25 ರಂದು ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ.

ಎಸ್ಎಸ್ಎಲ್​​ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆ

ತಾಲೂಕಿನಲ್ಲಿ ಒಟ್ಟು 4466 ವಿದ್ಯಾರ್ಥಿಗಳಲ್ಲಿ 2208 ಗಂಡು ಮಕ್ಕಳು ಮತ್ತು 2258 ಹೆಣ್ಣು ಮಕ್ಕಳು ಈ ಬಾರಿ ಎಸ್ಎಸ್ಎಲ್​​ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟು 15 ಪರೀಕ್ಷಾ ಕೇಂದ್ರಗಳಿಗಿದ್ದು, ನಗರದಲ್ಲಿ 5 ಹಾಗೂ ಗ್ರಾಮೀಣ ಪ್ರದೇಶದಲ್ಲಿ 10 ಪರೀಕ್ಷಾ ಕೇಂದ್ರಗಳಿವೆ.

ಈ ಪರೀಕ್ಷಾ ಕೇಂದ್ರಗಳಿಗೆ ನಗರಸಭೆ ಮತ್ತು ಗ್ರಾ.ಪಂ ಆಡಳಿತ ವತಿಯಿಂದ ಸ್ಯಾನಿಟೈಜ್ ಮಾಡಿಸಲಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕುಳಿತು ಪರೀಕ್ಷೆ ಬರೆಯಲು ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲಾಗಿದ್ದು, ಪರೀಕ್ಷೆ ಬರೆಯುತ್ತಿರುವ ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಓದಿ:ಕೊರೊನಾ ಭೀತಿ: ಇನ್ಮುಂದೆ ಹಾವೇರಿಯಲ್ಲಿ ಠಾಣೆ ಹೊರಗಡೆಯೇ ಪೊಲೀಸರ ಕೆಲಸ

ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಈಗಾಗಲೇ ಆರು ಲೀಟರ್ ಸಾನಿಟೈಜರ್​ ಮತ್ತು ವಿದ್ಯಾರ್ಥಿಗಳನ್ನು ಪರೀಕ್ಷಿಸಲು ಒಂದು ಥರ್ಮೊ ಗನ್ ನೀಡಲಾಗಿದೆ‌ ಎಂದು ಬಿಇಓ ಎನ್.ಶ್ರೀಧರ ತಿಳಿಸಿದರು.

ABOUT THE AUTHOR

...view details