ರಾಣೆಬೆನ್ನೂರು:ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒಬ್ಬ ಬಫೂನ್ ಇದ್ದಂತೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ದಿನೇಶ್ ಗುಂಡೂರಾವ್ ಒಬ್ಬ ಬಫೂನ್: ಎಂ.ಪಿ.ರೇಣುಕಾಚಾರ್ಯ - ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾರ್ಯ
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒಬ್ಬ ಬಫೂನ್ ಇದ್ದಂತೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ರಾಣೆಬೆನ್ನೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಎಲ್ಲಾ ಕಾರ್ಯಕರ್ತರು ಶಕ್ತಿ ಮೀರಿ ಶ್ರಮ ಹಾಕಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. 15 ಕ್ಷೇತ್ರ ನಮ್ಮ ಕಣ್ಣ ಮುಂದಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಜ್ಞಾವಂತ ಮತದಾರರ ಆರ್ಶೀವಾದ ನಮ್ಮ ಅಭ್ಯರ್ಥಗಳ ಮೇಲಿದೆ. ರಾಜ್ಯ ಸರ್ಕಾರ ಸುಭದ್ರವಾಗಿರಲಿದೆ, ಮುಂದಿನ ಮೂರೂವರೆ ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಮುಂದೆ ಬರುವ 2023 ರ ಚುನಾವಣೆಯಲ್ಲೂ ನಮ್ಮದೇ ಸರ್ಕಾರ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಅಲ್ಲಿ ಮೂಲ ಹಾಗೂ ವಲಸಿಗರ ನಡುವೆ ಜಂಗಿ ಕುಸ್ತಿ ನಡೆಯುತ್ತಿದೆ. ಸಿದ್ದರಾಮಯ್ಯ ಏಕಾಂಗಿಯಾಗಿದ್ದು, ಅವರಿಗೆ ಯಾರೂ ಸಾಥ್ ನೀಡುತ್ತಿಲ್ಲ. ಅಲ್ಲದೇ ದಿನೇಶ್ ಗುಂಡುರಾವ್ ಒಬ್ಬ ಬಫೂನ್ ,ಅವರ ಪಕ್ಷದಲ್ಲೇ ಹೊಂದಾಣಿಕೆ ಇಲ್ಲ. ಚುನಾವಣೆ ಬಂದಾಗ ಅವರಿಗೆ ಎಚ್ಚರವಾಗುತ್ತೆ, ಆದ್ರೆ ನಾವು ಅಭಿವೃದ್ಧಿಯ ಕೆಲಸಗಳನ್ನು ಮಾಡುವ ಮುಖೇನ ಜನರ ಆರ್ಶೀವಾದ ಪಡೆಯುತ್ತೇವೆ ಎಂದರು.