ಹಾವೇರಿ:ಜಿಲ್ಲಾ ಪೊಲೀಸ್ ಇಲಾಖೆಯ ಪ್ರಸ್ತುತ ವರ್ಷದ ಕ್ರೀಡಾಕೂಟಕ್ಕೆ ಇಂದು ತೆರೆ ಬಿದ್ದಿದೆ.
ಹಾವೇರಿ ಜಿಲ್ಲಾ ಪೊಲೀಸ್ ಕ್ರೀಡಾಕೂಟಕ್ಕೆ ತೆರೆ - ಜಿಲ್ಲಾ ಪೊಲೀಸ್ ಕ್ರೀಡಾಕೂಟ
ನಗರದ ಕೊಳ್ಳಿ ಕಾಲೇಜ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪೊಲೀಸ್ ಇಲಾಕಾ ಕ್ರೀಡಾಕೂಟವು ಇಂದು ಅಂತಿಮಗೊಂಡಿದೆ.
District level police sports tournament ended at Haveri
ನಗರದ ಕೊಳ್ಳಿ ಕಾಲೇಜ್ ಮೈದಾನದಲ್ಲಿ ನಡೆದ ಪೊಲೀಸ್ ಇಲಾಖೆ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಪಶ್ಚಿಮವಲಯದ ಐಜಿಪಿ ಅಮೃತಪೌಲ್ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಕ್ರೀಡಾಕುಟದಲ್ಲಿ ಹಲವು ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದು, ಕ್ರೀಡಾಕೂಟದಲ್ಲಿ ವಿಜೇತರಾದ ಪೊಲೀಸ್ ಸಿಬ್ಬಂದಿಗೆ ಅಮೃತಪೌಲ್ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಹಾವೇರಿ ಎಸ್ಪಿ ಕೆ.ಜಿ.ದೇವರಾಜ್, ಎಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.