ಕರ್ನಾಟಕ

karnataka

ETV Bharat / state

ಡಿಕೆಶಿ ಪ್ರಕರಣ ರಾಜಕೀಯ ಪ್ರೇರಿತ ಎನ್ನುವ ಪ್ರಶ್ನೆಯೇ ಬರುವುದಿಲ್ಲ: ಬೊಮ್ಮಾಯಿ - minister Basavaraj Bommayi

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪ್ರಕರಣ ರಾಜಕೀಯ ಪ್ರೇರಿತ ಎನ್ನುವ ಪ್ರಶ್ನೆಯೇ ಬರುವುದಿಲ್ಲಾ ಎಲ್ಲವೂ ನ್ಯಾಯಾಲಯದ ನಿರ್ದೇಶನದಂತೆ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಡಿಕೆಶಿ ಪ್ರಕರಣ ರಾಜಕೀಯ ಪ್ರೇರಿತ ಎನ್ನುವ ಪ್ರಶ್ನೆಯೇ ಬರುವುದಿಲ್ಲಾ: ಬೊಮ್ಮಾಯಿ

By

Published : Aug 30, 2019, 5:49 PM IST

ಹಾವೇರಿ:ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪ್ರಕರಣ ರಾಜಕೀಯ ಪ್ರೇರಿತ ಎನ್ನುವ ಪ್ರಶ್ನೆಯೇ ಬರುವುದಿಲ್ಲಾ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಎಲ್ಲವೂ ನ್ಯಾಯಾಲಯದ ನಿರ್ದೇಶನದಂತೆ ನಡೆಯುತ್ತಿದೆ. ಸಿಎಂ ಬಿ.ಎಸ್ ಯಡಿಯೂರಪ್ಪ ಶನಿವಾರ ಹಾವೇರಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ನೆರೆ ಸಂತ್ರಸ್ತರಿಗೆ ಎಲ್ಲ ರೀತಿಯ ಸಹಾಯ ಹಸ್ತ ಚಾಚುವಂತೆ ಅವರಲ್ಲಿ ಕೇಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಡಿಕೆಶಿ ಪ್ರಕರಣ ರಾಜಕೀಯ ಪ್ರೇರಿತ ಎನ್ನುವ ಪ್ರಶ್ನೆಯೇ ಬರುವುದಿಲ್ಲಾ: ಬೊಮ್ಮಾಯಿ

ಇದೇ ವೇಳೆ, ಗೃಹ ಖಾತೆ ಸ್ವೀಕರಿಸಿದ ಬಳಿಕ ಅವರು ಇದೇ ಪ್ರಥಮ ಬಾರಿಗೆ ಹಾವೇರಿಗೆ ಬಂದಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಹಾವೇರಿ ಜಿಲ್ಲೆಯ ಮುಂದಿನ ಮೂರ್ನಾಲ್ಕು ವರ್ಷಗಳ ಅಭಿವೃದ್ಧಿ ಕುರಿತಂತೆ ವಿಷನ್ ಡಾಕ್ಯುಮೆಂಟ್ ರಚಿಸಲಾಗುವುದು. ಇದರಲ್ಲಿ ರಾಜಕೀಯ ಪ್ರತಿನಿಧಿಗಳು ಸೇರಿದಂತೆ ವಿವಿಧ ವಲಯಗಳ ಪರಿಣಿತರಿರಲಿದ್ದಾರೆ. ಈ ಡಾಕ್ಯುಮೆಂಟ್ ಜಿಲ್ಲೆಯ ಅಭಿವೃದ್ದಿಗೆ ಮಾರ್ಗದರ್ಶನ ನೀಡುವ ದಿಕ್ಸೂಚಿಯಾಗಲಿದೆ ಎಂದು ತಿಳಿಸಿದರು.

ಇನ್ನೂ ಇದೇ ವೇಳೆ ಹುಚ್ಚ ವೆಂಕಟ್ ಕುರಿತಂತೆ ಕೇಳಿದ ಪ್ರಶ್ನೆಗೆ ಸಚಿವ ಬಸವರಾಜ್ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ABOUT THE AUTHOR

...view details