ಕರ್ನಾಟಕ

karnataka

ETV Bharat / state

ವಿದ್ಯುತ್​​ ತಂತಿ ತಗುಲಿ ಬಾಲಕ ಸಾವು - ಬಾಲಕ

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನಲ್ಲಿ ವಿದ್ಯುತ್ ತಂತಿ ತಗುಲಿ ಎಂಟು ವರ್ಷದ ಬಾಲಕ ದಿಗಂತ್​ ಎಂಬಾತ ಸಾವನ್ನಪ್ಪಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ಬಾಲಕ ದಿಗಂತ್

By

Published : Apr 11, 2019, 9:56 PM IST

ಹಾವೇರಿ: ವಿದ್ಯುತ್ ತಂತಿ ತಗುಲಿ ಎಂಟು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಜೇಕಿನಗಟ್ಟಿ ತಾಂಡಾದಲ್ಲಿ ನಡೆದಿದೆ.

ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ ಬಾಲಕ ಹಾಗೂ ಕುಟುಂಬಸ್ಥರ ಆಕ್ರಂದನ

ಮೃತ ಬಾಲಕನನ್ನು ದಿಗಂತ್ ನಾಯಕ್ ಎಂದು ಗುರುತಿಸಲಾಗಿದೆ. ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನ ಸಾವಿಗೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಮೃತ ಬಾಲಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ABOUT THE AUTHOR

...view details