ರಾಣಿಬೆನ್ನೂರು:ನಗರದ ಜಾನುವಾರು ಮಾರುಕಟ್ಟೆ ಬಳಿ ಇರೋ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರೂಪಾಯಿ ವಶಪಡಿಸಿಕೊಂಡ ಘಟನೆ ನಡೆದಿದೆ.
ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರೂಪಾಯಿ ಚುನಾವಣಾಧಿಕಾರಿಗಳ ವಶ - ರಾಣಿಬೆನ್ನೂರಿನಲ್ಲಿ ನಾಲ್ಕು ಲಕ್ಷ ರೂಪಾಯಿ ಚುನಾವಣಾಧಿಕಾರಿಗಳ ವಶ
ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಮತ್ತು ಹಿರೇಕೆರೂರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕರ್ತವ್ಯದಲ್ಲಿರೋ ವಿವಿಧ ಅಧಿಕಾರಿಗಳ ತಂಡ ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರೂಪಾಯಿ ವಶಪಡಿಸಿಕೊಂಡಿದೆ.
ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಮತ್ತು ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ ಐದರಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕ್ಷೇತ್ರದಲ್ಲಿ ಚೆಕ್ ಪೋಸ್ಟ್ ಗಳನ್ನ ತೆರೆಯಲಾಗಿದ್ದು, ಇಂದು ರಾಣೆಬೆನ್ನೂರು ನಗರದ ಜಾನುವಾರು ಮಾರುಕಟ್ಟೆ ಬಳಿ ಇರೋ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ ನಾಲ್ಕು ಲಕ್ಷ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ.
ಗದಗ ಮೂಲದ ಫಕೀರೇಶ ಎಂಬುವರಿಗೆ ಸೇರಿದ ಹಣ ಇದಾಗಿದ್ದು, ಚುನಾವಣೆ ಕರ್ತವ್ಯದಲ್ಲಿರೋ ವಿವಿಧ ಅಧಿಕಾರಿಗಳ ತಂಡ ಈ ಹಣವನ್ನ ವಶಪಡಿಸಿಕೊಂಡಿದೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ತನಿಖೆ ನಡೆಸಲಾಗ್ತಿದೆ.