ಹಾವೇರಿ:ಇಂದು ಹಾವೇರಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ನಗರಸಭೆ ಸುತ್ತಮುತ್ತಲಿನ 500 ಮೀ. ಪ್ರದೇಶದಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಹಾವೇರಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಪಕ್ಷೇತರರಿಗೆ ಗಾಳ! - ಹಾವೇರಿ ನಗರಸಭೆ ಅಧ್ಯಕ್ಷ
ಹಾವೇರಿ ನಗರಸಭೆಯಲ್ಲಿ ಕಾಂಗ್ರೆಸ್ - 15 ಸದಸ್ಯರು, ಬಿಜೆಪಿ - 9 ಸದಸ್ಯರು ಮತ್ತು 7 ಮಂದಿ ಪಕ್ಷೇತರ ಸದಸ್ಯರಿದ್ದಾರೆ. ಪಕ್ಷೇತರ ಸದಸ್ಯರನ್ನು ಸೆಳೆದು ಅಧಿಕಾರದ ಚುಕ್ಕಾಣಿ ಹಿಡಿಯಲು ಎರಡೂ ಪಕ್ಷಗಳು ತಯಾರಿ ನಡೆಸಿವೆ.
ಹಾವೇರಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಹಾವೇರಿ ನಗರಸಭೆಯಲ್ಲಿ ಕಾಂಗ್ರೆಸ್ - 15 ಸದಸ್ಯರು, ಬಿಜೆಪಿ - 9 ಮತ್ತು 7 ಮಂದಿ ಪಕ್ಷೇತರ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ''ಅ'' ವರ್ಗಕ್ಕೆ ಮೀಸಲಿದ್ದು, ಪಕ್ಷೇತರ ಸದಸ್ಯರನ್ನು ಸೆಳೆದು ಅಧಿಕಾರದ ಚುಕ್ಕಾಣಿ ಹಿಡಿಯಲು ಎರಡೂ ಪಕ್ಷಗಳು ತಯಾರಿ ನಡೆಸಿವೆ.
ಚುನಾವಣೆ ಹಿನ್ನೆಲೆಯಲ್ಲಿ ನಗರಸಭೆ ಸುತ್ತಮುತ್ತಲಿನ 500 ಮೀಟರ್ ಪ್ರದೇಶದಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಶಂಕರ ಜಿ.ಎಸ್. ಆದೇಶ ಹೊರಡಿಸಿದ್ದಾರೆ.