ಹಾವೇರಿ:ವಿದ್ಯಾಭ್ಯಾಸ ನಡೆಸಲು ನಮಗೆ ಲ್ಯಾಪ್ಟಾಪ್ ಅವಶ್ಯವಿದ್ದು, ಸರ್ಕಾರ ನಮಗೂ ಲ್ಯಾಪ್ಟಾಪ್ ವಿತರಿಸಬೇಕೆಂದು ಆಗ್ರಹಿಸಿ ನಗರದಲ್ಲಿಂದು ಇಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಲ್ಯಾಪ್ಟಾಪ್ ವಿತರಣೆಗೆ ಆಗ್ರಹಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ - ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರತಿಭಟನೆ
ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ಗಳನ್ನು ವಿತರಣೆ ಮಾಡುತ್ತಿದ್ದು, ನಮಗೂ ಲ್ಯಾಪ್ಟಾಪ್ ವಿತರಿಸುವಂತೆ ಆಗ್ರಹಿಸಿ ನಗರದಲ್ಲಿಂದು ಇಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಎಐಡಿಎಸ್‌ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ನಗರದ ಹೊರವಲಯದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಿಂದ ದೇವಗಿರಿಯ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸುತ್ತಿದೆ. ಆದರೆ ಲ್ಯಾಪ್ಟಾಪ್ ಅತ್ಯವಶ್ಯವಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನ ಕಡೆಗಣಿಸಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿರುವ 12 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರ ಈ ಕೂಡಲೇ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸುವಂತೆ ಆಗ್ರಹಿಸಿದರು.