ಹಾವೇರಿ: ಕೊರೊನಾ ವೈರಸ್ ಸಮಾಜಿಕ ಪಿಡುಗಾಗಿದ್ದು, ಇದರ ನಿಯಂತ್ರಣಕ್ಕೆ ಕೇವಲ ಆರೋಗ್ಯ ಇಲಾಖೆ ಪೊಲೀಸ್ ಇಲಾಖೆ ಶ್ರಮಿಸಿದರೆ ಸಾಲದು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಕೊರೊನಾ ತಡೆಗಟ್ಟಲು ಪ್ರತಿಯೊಬ್ಬರು ಕೈ ಜೋಡಿಸಬೇಕು: ಕೃಷಿ ಸಚಿವ ಬಿ. ಸಿ. ಪಾಟೀಲ್ - ಕೃಷಿ ಸಚಿವ ಬಿಸಿ ಪಾಟೀಲ್
ಕೊರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿವೆ. ಅವುಗಳನ್ನ ಚಾಚೂತಪ್ಪದೆ ಪಾಲಿಸಿ ಎಂದು ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು.
ಕೊರೊನಾ ತಡೆಗಟ್ಟಲು ಪ್ರತಿಯೊಬ್ಬರು ಶ್ರಮಿಸಬೇಕು: ಕೃಷಿ ಸಚಿವ ಬಿ. ಸಿ. ಪಾಟೀಲ್
ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆ ನಡೆಸಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಪ್ರತಿಯೊಬ್ಬರು ಹೋರಾಡಬೇಕು. ಶುಚಿತ್ವ ಕಾಪಾಡಿಕೊಳ್ಳುವುದರ ಜೊತೆಗೆ ಸಮಾಜಿಕ ಅಂತರ ಕೂಡ ಕಾಪಾಡಿಕೊಳ್ಳಬೇಕು. ಕೊರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅವುಗಳನ್ನ ಚಾಚುತಪ್ಪದೆ ಪಾಲಿಸಿ ಎಂದು ಪಾಟೀಲ್ ತಿಳಿಸಿದರು.