ಕರ್ನಾಟಕ

karnataka

ETV Bharat / state

ನೆಹರು ಓಲೇಕಾರ್ ಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳ ಆಗ್ರಹ - ಹಾವೇರಿ, ಶಾಸಕ ನೆಹರು ಓಲೇಕಾರ್, ಸಚಿವ ಸ್ಥಾನ ನೀಡಲು ಆಗ್ರಹ, ಅಭಿಮಾನಿಗಳಿಂದ ಆಗ್ರಹ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕನ್ನಡ ವಾರ್ತೆ, ಈ ಟಿವಿ ಭಾರತ

ಬಿ.ಎಸ್. ಯಡಿಯೂರಪ್ಪ ನೇತೃತ್ವದ ನೂತನ ಸರ್ಕಾರದಲ್ಲಿ ಹಾವೇರಿ ಜಿಲ್ಲೆಯಿಂದ ಶಾಸಕ ನೆಹರು ಓಲೇಕಾರ್ ಗೆ ಸಚಿವ ಸ್ಥಾನ ನೀಡುವಂತೆ ಓಲೇಕಾರ್ ಅಭಿಮಾನಿಗಳು ಒತ್ತಾಯಿಸಿದ್ದಾರೆ.

ನೆಹರು ಓಲೇಕಾರ್ ಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳಿಂದ ಆಗ್ರಹ

By

Published : Aug 1, 2019, 6:30 AM IST

ಹಾವೇರಿ : ರಾಜ್ಯ ಸಚಿವ ಸಂಪುಟ ರಚನೆ ಕಸರತ್ತು ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲೂ ಸಹ ಸಚಿವ ಸ್ಥಾನ ಅಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದೆ. ಅಲ್ಲದೆ, ಶಾಸಕರ ಬೆಂಬಲಿಗರು ಮುಖ್ಯಮಂತ್ರಿಗೆ ತಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡಿ ಎಂದು ಒತ್ತಾಯಿಸುತ್ತಿದ್ದಾರೆ.

ಈಗಾಗಲೇ ಜಿಲ್ಲೆಯಿಂದ ಬಸವರಾಜ್ ಬೊಮ್ಮಾಯಿ ಮತ್ತು ಸಿ.ಎಂ. ಉದಾಸಿ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಈ ನಡುವೆ ನೆಹರು ಓಲೇಕಾರ್‌ಗೆ ಸಹ ಸಚಿವ ಸ್ಥಾನ ನೀಡಬೇಕೆಂಬ ಕೂಗು ಕೇಳಿಬಂದಿದೆ.

ನೆಹರು ಓಲೇಕಾರ್ ಈಗಾಗಲೇ ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅಲ್ಲದೆ ಮೂರು ಬಾರಿ ಶಾಸಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿ.ಎಂ. ಯಡಿಯೂರಪ್ಪ ತಮ್ಮ ಸಚಿವ ಸಂಪುಟದಲ್ಲಿ ನೆಹರು ಓಲೇಕಾರ್‌ಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ.

ನೆಹರು ಓಲೇಕಾರ್ ಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳಿಂದ ಆಗ್ರಹ

ಈ ಕುರಿತು ಶೀಘ್ರದಲ್ಲಿ ಸಿ.ಎಂ. ಯಡಿಯೂರಪ್ಪರನ್ನ ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದು ನೆಹರು ಫ್ಯಾನ್ಸ್​ ತಿಳಿಸಿದ್ದಾರೆ

For All Latest Updates

TAGGED:

Vis script

ABOUT THE AUTHOR

...view details