ಕರ್ನಾಟಕ

karnataka

ETV Bharat / state

ಸಾಲಬಾಧೆ ತಾಳದೆ ನೇಣಿಗೆ ಶರಣಾದ ರೈತ - haveri farmar sucide news

ಸಾಲಬಾಧೆ ತಾಳಲಾರದೆ ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಸಾಗರವಳ್ಳಿ ಗ್ರಾಮದಲ್ಲಿ ನಡೆದಿದೆ.

farmar commited sucide at haveri
ನೇಣಿಗೆ ಶರಣಾದ ರೈತ

By

Published : Feb 25, 2020, 5:28 PM IST

ಹಾವೇರಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಸಾಗರವಳ್ಳಿ ಗ್ರಾಮದಲ್ಲಿ ನಡೆದಿದೆ.

ಸಾಲಬಾಧೆ ತಾಳಲಾರದೆ ನೇಣಿಗೆ ಶರಣಾದ ರೈತ

ಮೃತ ರೈತನನ್ನು 35 ವರ್ಷದ ಪರಶುರಾಮ್ ಬಾಳಿಹಳ್ಳಿ ಎಂದು ಗುರುತಿಸಲಾಗಿದೆ. 1 ಎಕರೆ 16 ಗುಂಟೆ ಜಮೀನು ಹೊಂದಿದ್ದ ಪರಶುರಾಮ್, ಬ್ಯಾಂಕ್, ಫೈನಾನ್ಸ್​, ಕೈ ಸಾಲ, ಟ್ರ್ಯಾಕ್ಟರ್ ಸಾಲ ಎಂದು ಸುಮಾರು 18 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಇತ್ತ ಬೆಳೆದ ಭತ್ತದ ಬೆಳೆ ಸಹ ಕೈಕೊಟ್ಟಿದ್ದರಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಇನ್ನು ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ABOUT THE AUTHOR

...view details