ಹಾವೇರಿ:ಅತಿವೃಷ್ಟಿಗೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆ ನಾಶಕ್ಕೆ ಬೇಸತ್ತ ರೈತ, ನೇಣು ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅತಿವೃಷ್ಟಿ, ಸಾಲ ಭಾದೆ ತಾಳಲಾರದೆ ನೇಣಿಗೆ ಕೊರಳೊಡ್ಡಿದ ಹಾವೇರಿ ರೈತ - ಹಾವೇರಿ ಅಪರಾಧ ಸುದ್ದಿ
ಅತಿವೃಷ್ಟಿಗೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ಬೆಳೆ ಹಾಳಾಗಿದ್ದಕ್ಕೆ ಬೇಸತ್ತ ಜಿಲ್ಲೆಯ ಸವಣೂರು ತಾಲೂಕಿನ ಶಿರಬಡಗಿ ಗ್ರಾಮದ ರೈತನೋರ್ವ, ನೇಣು ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಲ್ಕು ಎಕರೆ ಜಮೀನು ಹೊಂದಿದ್ದ ಮೃತ ರೈತ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಎಂದು ಹೇಳಲಾಗುತ್ತಿದೆ.
ಆತ್ಮಹತ್ಯೆಗೆ ಶರಣಾದ ರೈತ
ಜಿಲ್ಲೆಯ ಸವಣೂರು ತಾಲೂಕಿನ ಶಿರಬಡಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತ ರೈತ ಶೇಖಪ್ಪ ಹಡಪದ (54) ಎಂದು ಗುರುತಿಸಲಾಗಿದೆ. ನಾಲ್ಕು ಎಕರೆ ಜಮೀನು ಹೊಂದಿದ್ದ ಶೇಖಪ್ಪ, ಲಕ್ಷಾಂತರ ರೂಪಾಯಿ ಬ್ಯಾಂಕ್ ಮತ್ತು ಕೈಸಾಲ ಮಾಡಿಕೊಂಡಿದ್ದ. ಅತಿವೃಷ್ಟಿಗೆ ಮೆಕ್ಕೆಜೋಳ ಬೆಳೆ ಹಾಳಾಗಿದ್ದರಿಂದ ಸಾಲ ತೀರಿಸಲಾಗದೆ ಬೇಸತ್ತ ರೈತ, ತನ್ನ ಜಮೀನಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.