ಹಾವೇರಿ:ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ - haveri farmer sucide news'
ಬ್ಯಾಂಕ್ ಮತ್ತು ಕೈಸಾಲ ಸೇರಿ ಒಟ್ಟು 4 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದ ರೈತನೊಬ್ಬ, ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಕೈಕೊಟ್ಟಿದ್ದರಿಂದ ಬೇಸತ್ತು ಶನಿವಾರ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ
ಬಸವರಾಜ ಮೊಗಲಿ (51) ಮೃತ ರೈತ. ಒಂದು ಎಕರೆ ಜಮೀನು ಹೊಂದಿದ್ದ ರೈತ ಬಸವರಾಜ, ಬ್ಯಾಂಕ್ ಮತ್ತು ಕೈಸಾಲ ಸೇರಿ ಒಟ್ಟು 4 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಕೈಕೊಟ್ಟಿದ್ದರಿಂದ ಬೇಸತ್ತು, ಶನಿವಾರ ಮನೆಯಲ್ಲೇ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.