ಹಾನಗಲ್( ಹಾವೇರಿ): ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹೇರೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕರಿಸಿದ್ದಪ್ಪ ಸಂಗಪ್ಪ ಕರಡಿ (44) ಮೃತ ರೈತ ಎನ್ನಲಾಗಿದೆ.
ಸಾಲಬಾಧೆ ತಾಳಲಾರದೆ ಹಾನಗಲ್ನಲ್ಲಿ ರೈತ ಆತ್ಮಹತ್ಯೆ - Farmer's suicide by debt
ಮೈತುಂಬ ಸಾಲ ಮಾಡಿಕೊಂಡಿದ್ದ ರೈತ ತಾನು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯ ಹಾನಗಲ್ ಬಳಿ ನಡೆದಿದೆ.
ಸಾಲಬಾಧೆ ತಾಳಲಾರದೆ ಹಾನಗಲ್ನಲ್ಲಿ ರೈತ ಆತ್ಮಹತ್ಯೆ
ಅರ್ಧ ಎಕರೆ ಜಮೀನನಲ್ಲಿ ಬೆಳೆದ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. 5 ಲಕ್ಷ ರೂಪಾಯಿ ಸಾಲ ಮಾಡಿ ಬೆಳೆ ಬೆಳೆದಿದ್ದ ಎನ್ನಲಾಗಿದೆ.
ಅಲ್ಲದೆ ಕೆಲವು ದಿನಗಳ ನಂತರ ತನ್ನ ಮಗಳ ಮದುವೆ ಮಾಡಬೇಕಿದ್ದ ರೈತ ಇದೀಗ ಅತಿಯಾದ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಡೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.