ಹಾವೇರಿ:ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ.
ಸಾಲ ತೀರಿಸಲಾಗದೇ ನೇಣಿಗೆ ಕೊರಳೊಡ್ಡಿದ ರೈತ - undefined
ಸಾಲಬಾಧೆಗೆ ಹಾವೇರಿ ಜಿಲ್ಲೆಯಲ್ಲಿ ಮತ್ತೋರ್ವ ರೈತ ಬಲಿಯಾಗಿದ್ದಾನೆ. ಕೃಷಿಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದ ರೈತ ಅದನ್ನು ತೀರಿಸಲಾಗದೆ ನೇಣಿಗೆ ಶರಣಾಗಿದ್ದಾನೆ.
![ಸಾಲ ತೀರಿಸಲಾಗದೇ ನೇಣಿಗೆ ಕೊರಳೊಡ್ಡಿದ ರೈತ](https://etvbharatimages.akamaized.net/etvbharat/prod-images/768-512-3938305-thumbnail-3x2-ggggy.jpg)
ರೈತ ಆತ್ಮಹತ್ಯೆ
ಒಂದೂವರೆ ಎಕರೆ ಜಮೀನು ಹೊಂದಿದ್ದ ರೈತ ಶಂಭಣ್ಣ(55) ಬ್ಯಾಂಕ್ ಮತ್ತು ಕೈ ಸಾಲವಾಗಿ ಎಂಟೂವರೆ ಲಕ್ಷ ರೂ. ಸಾಲ ಪಡೆದಿದ್ದ. ಮೆಕ್ಕೆಜೋಳ, ಹತ್ತಿ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ತನ್ನ ಜಮೀನಿನಲ್ಲೇ ನೇಣಿಗೆ ಶರಣಾಗಿದ್ದಾಗಿ ತಿಳಿದುಬಂದಿದೆ.
ಈ ಸಂಬಂಧ ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jul 25, 2019, 7:37 AM IST