ಹಾವೇರಿ :ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊರ್ವ ಸಾವಿಗೀಡಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ರೈತ ಸಾವು - kannada news
ರಾಣೇಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದ ಪರಿಣಾಮ ರೈತ ಸಾವನ್ನಪ್ಪಿದ್ದಾನೆ.
ಸಿಡಿಲು ಬಡಿದು ರೈತ ಸಾವು
ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದ ರೈತ ಚಿದಾನಂದಪ್ಪ(48) ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಸಾವನ್ನಪ್ಪಿದ್ದಾರೆ. ಇನ್ನೂ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.