ಹಾವೇರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕು ಕುದರಿಹಾಳ ಗ್ರಾಮದಲ್ಲಿ ನಡೆದಿದೆ.
ಹಾವೇರಿಯಲ್ಲಿ ಸಿಡಿಲು ಬಡಿದು ರೈತ ಸಾವು - Farmer Death in Ranebennuru Haveri
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕು ಕುದರಿಹಾಳ ಗ್ರಾಮದಲ್ಲಿ ನಡೆದಿದೆ

ಹಾವೇರಿಯಲ್ಲಿ ಸಿಡಿಲು ಬಡಿದು ರೈತ ಬಲಿ
ಶಿವಾನಂದಪ್ಪ ಹರಿಜನ (45) ವರ್ಷ ಮೃತ ರೈತ. ರೈತ ಶಿವಾನಂದಪ್ಪ, ಮಧ್ಯಾಹ್ನ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಬಂದ ಸಿಡಿಲು ಬಲಿ ಪಡೆದಿದೆ.
ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.