ಹಾವೇರಿ:ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ, ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ.
ಹಾವೇರಿಯಲ್ಲಿ ರೈತ ನೇಣಿಗೆ ಶರಣು: ಮೃತನ ಕುಟುಂಬಕ್ಕೆ ಬಿ.ಸಿ.ಪಾಟೀಲ್ ಸಾಂತ್ವನ - ಬಿತ್ತಿದ್ದ ಮೆಕ್ಕೆಜೋಳದ ಬೆಳೆ ಹಾಳಾಗಿದ್ದರಿಂದ ಬೇಸತ್ತು ನೇಣಿಗೆ ಶರಣು
ಹಾವೇರಿಯ ಗ್ರಾಮವೊಂದರಲ್ಲಿ ಸಾಲಬಾಧೆ ತಾಳಲಾರದೇ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ಬಿ.ಸಿ.ಪಾಟೀಲ ಸಾಂತ್ವಾನ
ಮೃತ ರೈತನನ್ನು 51ವರ್ಷದ ವೀರನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ. 6 ಎಕರೆ ಜಮೀನು ಹೊಂದಿದ್ದ ವೀರನಗೌಡ 11 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ. ಬಿತ್ತಿದ್ದ ಮೆಕ್ಕೆಜೋಳದ ಬೆಳೆ ಹಾಳಾಗಿದ್ದರಿಂದ ಬೇಸತ್ತು ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ರೈತನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ಶಾಸಕ ಬಿ.ಸಿ.ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ, ಮೃತನ ಕುಟುಂಬದವರಿಗೆ ಸಾಂತ್ವನ ಹೇಳಿದರು. ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.