ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ಆಲದಗೇರಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾಲಬಾಧೆ ತಾಳದೇ ನೇಣಿಗೆ ಶರಣಾದ ರೈತ - ಗದಿಗೆಪ್ಪ ಯಡಚಿ (65 ವರ್ಷ) ಮೃತ ದುರ್ದೈವಿ
ಹಿರೇಕೆರೂರು ತಾಲೂಕಿನ ಆಲದಗೇರಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಿಗೆಪ್ಪ ಯಡಚಿ
ಗದಿಗೆಪ್ಪ ಯಡಚಿ (65) ಮೃತ ರೈತ. ಈತ ಮೂರು ಎಕರೆ ಹದಿನೇಳು ಗುಂಟೆ ಜಮೀನು ಹೊಂದಿದ್ದು, ಬ್ಯಾಂಕ್ ಮತ್ತು ಕೈಸಾಲ ಅಂತಾ ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗ್ತಿದೆ.
ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಸರಿಯಾಗಿ ಬಾರದ ಕಾರಣ ಬೇಸತ್ತಿದ್ದ ಗದಿಗೆಪ್ಪ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.