ಹಾವೇರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ, ಜಿಲ್ಲೆಯ ಹಿರೇಕೆರೂರು ತಾಲೂಕಿನ ಅಬಲೂರು ಗ್ರಾಮದಲ್ಲಿ ನಡೆದಿದೆ.
ಹಾವೇರಿ: ಸಾಲಬಾಧೆ ತಾಳಲಾರದೆ ರೈತನ ಆತ್ಮಹತ್ಯೆ - ರೈತ ವಿಷ ಕುಡಿದು ಆತ್ಮಹತ್ಯೆ
ಹಾವೇರಿಯಲ್ಲಿ ರೈತನೋರ್ವ ಸಾಲಬಾದೆ ತಾಳಲಾರದೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ರೈತನನ್ನು ಉಜ್ಜಪ್ಪ ಬಸವಣ್ಣೆಪ್ಪ ಮಳವಳ್ಳಿ (59) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷಸೇವಿಸಿ ಉಜ್ಜಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ಎಕರೆ ಜಮೀನು ಹೊಂದಿದ್ದ ಈತ ಬ್ಯಾಂಕ್ ಮತ್ತು ಸ್ವಸಹಾಯ ಸಂಘಗಳಲ್ಲಿ 2 ಲಕ್ಷ 50 ಸಾವಿರ ರೂ. ಸಾಲ ಪಡೆದಿದ್ದ ಎನ್ನಲಾಗಿದೆ.
ಈ ಮಧ್ಯೆ ಬಿತ್ತನೆ ಮಾಡಿದ್ದ ಹತ್ತಿ ಸಹ ಅತಿವೃಷ್ಟಿಯಿಂದ ಹಾಳಾಗಿದ್ದರಿಂದ ರೈತ ಬೇಸತ್ತಿದ್ದ. ಅಲ್ಲದೆ ಬೆಳನಷ್ಟ ಸಹ ಬಿಡುಗಡೆಯಾಗದ ಕಾರಣ ತೀವ್ರ ಮಾನಸಿಕ ಒತ್ತಡಕ್ಕೆ ಸಿಲುಕಿದ್ದ ಉಜ್ಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.