ಹಾವೇರಿ:ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - haveri death news
ಅತಿವೃಷ್ಟಿ ಹಾಗೂ ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟ ಅನುಭವಿಸುತ್ತಿದ್ದ ರೈತನೊಬ್ಬ ಸಾಲ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಮೃತ ರೈತನನ್ನ 33 ವರ್ಷದ ಮಹಾದೇವಪ್ಪ ಹನುಮಂತಪ್ಪ ದುಂಡಪ್ಪನವರ್ ಎಂದು ಗುರುತಿಸಲಾಗಿದೆ. ಅತಿವೃಷ್ಟಿ ಹಾಗೂ ಅಕಾಲಿಕ ಮಳೆಗೆ ಬೆಳೆ ಹಾನಿಯಾಗಿರುವುದು ರೈತನನ್ನ ಸಾಲಬಾಧೆಗೆ ತಳ್ಳಿದೆ. ಒಂದು ಕಡೆ ಬೆಳೆನಷ್ಟ ಮತ್ತೊಂದು ಕಡೆ ಸಾಲ ಇದರಿಂದ ಬೇಸತ್ತ ರೈತ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ರೈತ ಮಹದೇವಪ್ಪ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಎರಡು ಲಕ್ಷ ಹಾಗೂ ಕೈ ಸಾಲ ರೂಪದಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ 60 ಸಾವಿರ ರೂಪಾಯಿ ಸಾಲ ಮಾಡಿದ್ದ ಎನ್ನಲಾಗಿದೆ. ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.