ರಾಣೆಬೆನ್ನೂರು:ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ರೈತರು ನಡು ರಸ್ತೆಯಲ್ಲಿ ತಡೆದು, ಪರಿಹಾರ ನೀಡುವಂತೆ ಆಗ್ರಹಿಸಿದ ಘಟನೆ ತಾಲೂಕಿನ ಮಾಕನೂರ ಗ್ರಾಮದ ಬಳಿ ನಡೆದಿದೆ.
ರೈತರ ಮನವಿಗೆ ಸ್ಪಂದಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಓದಿ: ರಾಜ್ಯದಲ್ಲಿ ನೂತನ ಆಮ್ಲಜನಕ ಘಟಕ ನಿರ್ಮಾಣಕ್ಕೆ ವಿಶೇಷ ರಿಯಾಯಿತಿ ಪ್ರಸ್ತಾವನೆ: ಸಚಿವ ಜಗದೀಶ್ ಶೆಟ್ಟರ್
ಬೆಂಗಳೂರಿಂದ ಪಿ.ಬಿ.ರಸ್ತೆ ಮಾರ್ಗವಾಗಿ ಹಿರೆಕೇರೂರಿಗೆ ತೆರಳುತ್ತಿದ್ದ ಸಮಯದಲ್ಲಿ ರೈತ ಸಂಘಟನೆ ಅಧ್ಯಕ್ಷ ಈರಣ್ಣ ಮಾಕನೂರ ಹಾಗೂ ರೈತರು, ಸಚಿವರನ್ನು ತಡೆದು ಪರಿಹಾರಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.
ಕಳೆದ ಒಂದು ತಿಂಗಳ ಹಿಂದೆ ರಾಣೆಬೆನ್ನೂರು ತಾಲೂಕಿನಲ್ಲಿ ಅಕಾಲಿಕ ಗಾಳಿ-ಮಳೆಯಿಂದ ಭತ್ತದ ಬೆಳೆ ನೆಲಕಚ್ಚಿ ನಾಶವಾಗಿತ್ತು. ಈ ಹಿನ್ನೆಲೆ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಜೀವನ ನಡೆಸುವುದು ಕಷ್ಟವಾಗಿದೆ. ಅಲ್ಲದೆ ಕೊರೊನಾ ಇರುವುದರಿಂದ ಬಹುತೇಕ ಭತ್ತದ ದರ ಪಾತಾಳಕ್ಕೆ ಕುಸಿದಿದೆ. ಇದರಿಂದ ರೈತರು ಬೆಳೆದಿದ್ದ ಅಲ್ಪ ಭತ್ತವು ಸಹ ಖರೀದಿಸುತ್ತಿಲ್ಲ ಎಂದು ಸಚಿವರ ಹತ್ತಿರ ತಮ್ಮ ಅಳಲು ತೋಡಿಕೊಂಡರು.
ರೈತರ ಮನವಿ ಆಲಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ತಕ್ಷಣ ಸ್ಥಳದಲ್ಲಿ ಹಾಜರಿದ್ದ ಜಿಲ್ಲಾಧಿಕಾರಿಗಳಿಗೆ ರೈತರ ಪರಿಹಾರ ನೀಡುವಂತೆ ಆದೇಶ ಮಾಡಿದ್ದಾರೆ. ಅಲ್ಲದೆ ಅಡಿಕೆ ಬೆಳೆಗೆ ಸಬ್ಸಿಡಿ ಮೂಲಕ ನೀರಾವರಿ ಒದಗಿಸಲು ಮುಖ್ಯಮಂತ್ರಿ ಜತೆ ಮಾತನಾಡುವೆ ಎಂದು ತಿಳಿಸಿ ನಂತರ ತೆರಳಿದರು.