ಕರ್ನಾಟಕ

karnataka

ETV Bharat / state

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ - ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಹಾನಗಲ್​​ನಲ್ಲಿ ಪ್ರತಿಭಟನೆ ನಡೆಸಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

farmers-protest-against-land-reform-act-apmc-act
ರೈತರ ಪ್ರತಿಭಟನೆ

By

Published : Aug 14, 2020, 5:20 PM IST

ಹಾನಗಲ್: ಭೂ ಸುಧಾರಣಾ ಕಾಯ್ದೆ ಜಾರಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಸರ್ಕಾರಗಳು ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳ ತಿದ್ದುಪಡಿ ಮೂಲಕ ಉಳ್ಳವರ ಹಿತಾಸಕ್ತಿ ಕಾಪಾಡಲು ಮುಂದಾಗುತ್ತಿವೆ. ಸರ್ಕಾರಗಳಿಗೆ ರೈತರ ಏಳಿಗೆಗಿಂತ ಉದ್ಯಮಿದಾರರ ಕಾಳಜಿ ಹೆಚ್ಚಾಗಿದೆ. ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದಾನೆ. ನಾವು ಯಾವುದೇ ಕಾರಣಕ್ಕೂ ಇಂತಹ ಕಾನೂನುಗಳನ್ನ ಜಾರಿಗೆ ತರಲು ಬಿಡುವುದಿಲ್ಲ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ್ ಎಚ್ಚರಿಸಿದರು.

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

ಈಗಾಗಲೇ ನಾವು ಈ ಕಾಯ್ದೆಗಳ ವಿರುದ್ಧ ಧ್ವನಿ ಎತ್ತಿ ಮನವಿ ಸಲ್ಲಿಸಿದ್ದೇವೆ. ಸರ್ಕಾರ ಇಂತಹ ಕಾಯ್ದೆಗಳನ್ನು ರಚಿಸುವುದು ಬಿಟ್ಟು ರೈತರಿಗೆ ಅನುಕೂಲವಾಗುವ ಕಾನೂನುಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಸರ್ಕಾರ ಈ ಕೂಡಲೇ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿಯನ್ನು ಹಿಂಪಡೆಯಬೇಕು ಇಲ್ಲವಾದಲ್ಲಿ ರೈತರು ತಕ್ಕ ಉತ್ತರವನ್ನು ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ABOUT THE AUTHOR

...view details