ಹಾವೇರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮುರುಘರಾಜೇಂದ್ರ ಮಠದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿದರು.
ಹಾವೇರಿಯಲ್ಲಿ ರೈತರ ಪ್ರತಿಭಟನೆ: ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ - Farmers' protest in Haveri
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಹಾವೇರಿಯಲ್ಲಿ ಕರ್ನಾಟಕ ರೈತ ಸಂಘ ಮತ್ತು ಹಸಿರುಸೇನೆಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಡಳಿತ ಹಾಗೂ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಜಿಲ್ಲೆಯ ರೈತರಿಗೆ ಕಳೆದ ನಾಲ್ಕು ವರ್ಷಗಳಿಂದ ಬೆಳೆ ವಿಮೆ ಸಿಕ್ಕಿಲ್ಲ. ಜೊತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಿಸಾನ್ ಸಮ್ಮಾನ್ ಎಂಬುದು, ಕಿಸಾನ್ ಅವಮಾನ್ ಎಂಬಂತಾಗಿದೆ. ಜಿಲ್ಲಾಡಳಿತ ಎಚ್ಚೆತ್ತುಕೊಂಡು ರೈತರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಉಗ್ರವಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ್, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.