ಹಾವೇರಿ: ಸಾಲಬಾಧೆ ತಾಳಲಾರದೆ ಕೆರೆಯಲ್ಲಿ ಬಿದ್ದು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಾವೇರಿಯಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆ - ರೈತ ಆತ್ಮಹತ್ಯೆ
ಸಾಲಬಾಧೆ ತಾಳಲಾರದೆ ಕೆರೆಯಲ್ಲಿ ಬಿದ್ದು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ರೈತ
ಹನುಮಂತಪ್ಪ ಪವಾಡಿ 54 ವರ್ಷ ಮೃತಪಟ್ಟ ರೈತ. ಎರಡು ಎಕರೆ ಜಮೀನು ಹೊಂದಿದ್ದ ಈತ, ಸಹಕಾರಿ ಸಂಘಗಳು ಮತ್ತು ಕೈಸಾಲ ಸೇರಿ ನಾಲ್ಕು ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ. ಎರಡು ತಿಂಗಳ ಹಿಂದೆ ಸುರಿದ ನಿರಂತರ ಮಳೆಗೆ ಮನೆ ಬಿದ್ದು ಹೋಗಿದ್ದು, ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆ ಜೋಳದ ಬೆಳೆ ಸಂಪೂರ್ಣ ಹಾಳಾಗಿತ್ತು. ಇದರಿಂದ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Oct 8, 2019, 3:18 PM IST