ಹಾವೇರಿ: ಯೂರಿಯಾ ಗೊಬ್ಬರಕ್ಕಾಗಿ ರೈತರು ಗಂಟೆಗಟ್ಟಲೆ ಸರದಿ ಸಾಲಿಯಲ್ಲಿ ನಿಂತ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ.
ಕೃಷಿ ಸಚಿವ ಬಿ.ಸಿ. ಪಾಟೀಲ್ ತವರು ಕ್ಷೇತ್ರದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರ ಪರದಾಟ
ಹಾವೇರಿಯಲ್ಲಿ ರೈತರು ಯೂರಿಯಾ ಗೊಬ್ಬರಕ್ಕಾಗಿ ಪರದಾಡುತ್ತಿದ್ದ ದೃಶ್ಯ ಕಂಡುಬಂದಿದೆ. ಬೆಳಗ್ಗೆಯಿಂದಲೇ ಗೊಬ್ಬರ ಪಡೆಯಲು ರೈತರು ಸಾಲುಗಟ್ಟಿ ನಿಂತ್ತಿದ್ದು, ಸಾಮಾಜಿಕ ಅಂತರ ಮರೆತ್ತಿದ್ದರು. ಅಲ್ಲದೆ ಗೊಬ್ಬರ ವಿತರಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.
ಪ್ರತಿಯೊಬ್ಬ ರೈತನಿಗೆ 5 ಚೀಲ ಯೂರಿಯಾ ಗೊಬ್ಬರ ನೀಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಮುಂಜಾನೆಯಿಂದಲೇ ನೂರಾರು ರೈತರು ಸಾಲುಗಟ್ಟಿ ನಿಂತಿದ್ದರು. ತಾಲೂಕಿನಲ್ಲಿ ಕೊರೊನಾ ತಾಂಡವಾಡುತ್ತಿದ್ದರು ರೈತರು ಮಾಸ್ಕ್ ಧರಿಸಿರಲಿಲ್ಲ. ಅಲ್ಲದೆ ಸಾಮಾಜಿಕ ಅಂತರ ಮರೆತು ಗೊಬ್ಬರಕ್ಕಾಗಿ ಪರದಾಡುತ್ತಿದ್ದ ದೃಶ್ಯ ಕಂಡುಬಂತು.
ಕೃಷಿ ಸಚಿವ ಬಿ.ಸಿ. ಪಾಟೀಲ್ ಪ್ರತಿನಿಧಿಸುವ ಕ್ಷೇತ್ರದಲ್ಲಿ ರೈತರ ಪರಿಸ್ಥಿತಿ ಹೀಗಾದರೆ ಹೇಗೆ ಎಂದು ರೈತ ಮುಖಂಡರು ಪ್ರಶ್ನಿಸಿದ್ದಾರೆ. ಹಿರೇಕೆರೂರು ತಾಲೂಕಿನಲ್ಲಿ ಕೊರೊನಾ ದಾಂಗುಡಿ ಇಟ್ಟಿದೆ. ಈ ನಡುವೆಯೇ ಸರ್ಕಾರ ಗೊಬ್ಬರ ಬಿತ್ತನೆ ಬೀಜ ಕೊರತೆ ಆಗದಂತೆ ರೈತರಿಗೆ ವಿತರಿಸುವ ವ್ಯವಸ್ಥೆ ಕಲ್ಪಿಸುವಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ.