ಹಾವೇರಿ:ಜಿಲ್ಲೆಯ ಹಾನಗಲ್ನಲ್ಲಿ ಅಗ್ನಿ ಅಕಸ್ಮಿಕ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ - ಅಗ್ನಿಶಾಮಕದಳ
ಹಾವೇರಿ ಜಿಲ್ಲೆಯ ಹಾನಗಲ್ನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯುತ್ ಶಾರ್ಟ್ ಸರ್ಕೂಟ್ನಿಂದ ಅಗ್ನಿಅವಘಡ ಸಂಭವಿಸಿದೆ ಎನ್ನಲಾಗಿದೆ.
ಅಗ್ನಿ ಆಕಸ್ಮಿಕ
ನಗರದ ಮಕಬೂಲ್ ಅಹಮದ್ ಪಟೇಗಾರ ಎಂಬುವವರಿಗೆ ಸೇರಿದ ಮನೆಯಲ್ಲಿ ಅಗ್ನಿ ಅಕಸ್ಮಿಕ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಮನೆಯಲ್ಲಿ ಯಾರು ಇಲ್ಲದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Last Updated : Sep 21, 2019, 10:49 PM IST