ಹಾವೇರಿ:ಜಿಲ್ಲೆಯಲ್ಲಿ ಇಂದು 119 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3668 ಕ್ಕೇರಿದಂತಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ, 119 ಮಂದಿಗೆ ಪಾಸಿಟಿವ್ - Corona in Haveri
ಹಾವೇರಿ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಐವರು ಮೃತಪಟ್ಟಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾದಿಂದ ಮೃತರಾದವರ ಸಂಖ್ಯೆ 85 ಕ್ಕೇರಿದಂತಾಗಿದೆ.
ಇಂದು 82 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಹಾನಗಲ್ ತಾಲೂಕಿನಲ್ಲಿ 16, ಹಾವೇರಿ ತಾಲೂಕಿನಲ್ಲಿ 19, ಹಿರೇಕೆರೂರು ತಾಲೂಕಿನಲ್ಲಿ 13 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ರಾಣೆಬೆನ್ನೂರು ತಾಲೂಕಿನಲ್ಲಿ 46, ಸವಣೂರು ತಾಲೂಕು, ಶಿಗ್ಗಾವಿ ಹಾಗೂ ಬ್ಯಾಡಗಿ ತಾಲೂಕಿನಲ್ಲಿ ತಲಾ 08 ಜನರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯೇತರ ಒಬ್ಬರಿಗೆ ಪಾಸಿಟಿವ್ ಕಂಡುಬಂದಿದೆ. ಕೊರೊನಾದಿಂದ ಐವರು ಮೃತಪಟ್ಟಿದ್ದಾರೆ.
ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾದಿಂದ ಮೃತರಾದವರ ಸಂಖ್ಯೆ 85 ಕ್ಕೇರಿದಂತಾಗಿದೆ. ಜಿಲ್ಲೆಯಲ್ಲಿ 841 ಜನ ಹೋಂ ಐಸೋಲೇಷನ್ನಲ್ಲಿ 483 ಜನ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣನವರ್ ತಿಳಿಸಿದ್ದಾರೆ.