ಹಾವೇರಿ: ಉತ್ತರ ಕರ್ನಾಟಕವನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳು ಮುಖ್ಯಮಂತ್ರಿಯಾಗಬೇಕೆಂದು ಅಪೇಕ್ಷೆ ಪಡುವುದರಲ್ಲಿ ತಪ್ಪೇನಿದೆ? ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಪ್ರಶ್ನಿಸಿದ್ದಾರೆ.
ಸಿಎಂ ಆಗ್ಬೇಕೆಂದು ಅಪೇಕ್ಷೆ ಪಡೋದ್ರಲ್ಲಿ ತಪ್ಪೇನಿದೆ: ಹೆಚ್.ಕೆ.ಪಾಟೀಲ್ - HK Patil comments to BJP's election manifesto in Bihar
ಕೋವಿಡ್ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಯವರಿಗೆ ನಾಚಿಕೆ ಆಗಬೇಕು ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಹೆಚ್.ಕೆ.ಪಾಟೀಲ್
ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ, ಉತ್ತರಕರ್ನಾಟಕದವರು ಮುಖ್ಯಮಂತ್ರಿಯಾಗಬೇಕು ಎಂದಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಕೇಳಿದ ಅವರು, ಬಿಹಾರದ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಭರವಸೆ ಕುರಿತು ಪ್ರತಿಕ್ರಿಯಿಸಿ, ಇದು ಕೆಳಮಟ್ಟದ ನೀಚತನ ಎಂದರು.
ಕೋವಿಡ್ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಯವರಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ, ಕೇಂದ್ರ ಸರ್ಕಾರ ದೇಶದ ಪ್ರಜೆಗಳಿಗೆ ಉಚಿತವಾಗಿ ಲಸಿಕೆ ಹಂಚುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.