ಹಾವೇರಿ :ನೆರೆ ಹಾವಳಿಗೆ ಸರ್ಕಾರ ನೀಡುತ್ತಿರುವ ಪರಿಹಾರ ವೈಜ್ಞಾನಿಕವಾಗಿಲ್ಲವೆಂದು ಆರೋಪಿಸಿ ಜಿಲ್ಲೆಯಲ್ಲಿಂದು ರೈತ ಸಂಘಟನೆ ಪ್ರತಿಭಟನೆ ನಡೆಸಿತು.
ನಗರದ ಮುರುಘಾ ರಾಜೇಂದ್ರಮಠದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತರು ಸರ್ಕಾರದ ನೀತಿ ರೈತ ವಿರೋಧಿಯಾಗಿದೆ ಎಂದು ಆರೋಪಿಸಿದರು.
ನೆರೆ ಹಾವಳಿಗೆ ಸಾಲುತ್ತಿಲ್ಲ ಸರ್ಕಾರದ ಪರಿಹಾರ; ಹಾವೇರಿಯಲ್ಲಿ ರೈತ ಸಂಘಟನೆಯಿಂದ ಪ್ರತಿಭಟನೆ ಸರ್ಕಾರ ಗುಂಟೆಗೆ ಕೇವಲ 68 ರೂಪಾಯಿ ಪರಿಹಾರ ನೀಡಲು ಮುಂದಾಗಿದೆ ,ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗಲ್ಲ. ಕನಿಷ್ಠರೈತರಿಗೆ ಎಕರೆಗೆ 25 ಸಾವಿರ ರೂಪಾಯಿಯಾದರೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಹಾವೇರಿ ಜಿಲ್ಲೆಯ ರೈತರು ಹತ್ತಿ, ಮೆಕ್ಕೆಜೋಳ ಬೆಳೆಯುತ್ತಾರೆ. ಇವುಗಳನ್ನು ಬೆಳೆಯಲು ಕನಿಷ್ಠ ಎಕರೆಗೆ 20 ಸಾವಿರ ರೂಪಾಯಿಯಾದರು ಖರ್ಚಾಗುತ್ತೆ. ಆದ್ದರಿಂದ ಸರ್ಕಾರ ಪರಿಹಾರ ಬೆಲೆ ಪರಿಷ್ಕರಣೆ ಮಾಡಬೇಕು ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.