ಹಾವೇರಿ:ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಖಾಸಗಿ ವೈದ್ಯರು ಸರ್ಕಾರಿ ಕೋವಿಡ್ ಆಸ್ಪತ್ರೆಗಳಿಗೆ ತೆರಳಿ ಉಚಿತವಾಗಿ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ.
ಹಾವೇರಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸೇವೆ ಸಲ್ಲಿಸಲು 540 ಖಾಸಗಿ ವೈದ್ಯರ ನಿರ್ಧಾರ
ಸರ್ಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ಉಚಿತ ಸೇವೆ ನೀಡಲು ಹಾವೇರಿ ಜಿಲ್ಲಾ ಖಾಸಗಿ ವೈದ್ಯರು ನಿರ್ಧರಿಸಿದ್ದಾರೆ.
ಉಚಿತ ಸೇವೆಗೆ ಮುಂದಾದ ಹಾವೇರಿಯ ಖಾಸಗಿ ವೈದ್ಯರು
ಜಿಲ್ಲೆಯ ಸುಮಾರು 540 ಖಾಸಗಿ ವೈದ್ಯರು ಸರ್ಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ಉಚಿತ ಸೇವೆ ನೀಡಲಿದ್ದಾರೆ. ಜಿಲ್ಲಾಡಳಿತದ ವಿನಂತಿ ಮೇರೆಗೆ ವೈದ್ಯರು ಈ ನಿರ್ಧಾರ ಕೈಗೊಂಡಿದ್ದಾರೆ.
ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ ಐದು ಗಂಟೆಯಿಂದ ಕಾರ್ಯನಿರ್ವಹಿಸಲಿದ್ದಾರೆ. ಇದರಿಂದಾಗಿ ಕೋವಿಡ್ ಆಸ್ಪತ್ರೆಗಳ ವೈದ್ಯರ ಕೊರತೆ ನೀಗಲಿದೆ