ಹಾವೇರಿ:ಹಾಸ್ಟೆಲ್ ಕಟ್ಟಡದ ಮೇಲಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಬಿಸಿಎಂ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.
ಹಾವೇರಿಯಲ್ಲಿ ಹಾಸ್ಟೆಲ್ ಕಟ್ಟಡದ ಮೇಲಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವು - sudden died a girl in ranebennuru
ಇಂದು ಪರೀಕ್ಷೆ ಇದ್ದ ಕಾರಣ ಬೆಳಿಗ್ಗೆ ಬೇಗ ಎದ್ದು ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿನಿ ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ.
ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ.
ಕಾವ್ಯಾ ಬೆನ್ನೂರ(16) ಮೃತ ವಿದ್ಯಾರ್ಥಿನಿ. ಕಾವ್ಯ, ನಗರದ ರಾಜರಾಜೇಶ್ವರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಪರೀಕ್ಷೆ ಇದ್ದ ಕಾರಣ ಮುಂಜಾನೆ ಬೇಗನೆ ಎದ್ದು ಶೌಚಾಲಯಕ್ಕೆ ಹೋದಾಗ ಆಯತಪ್ಪಿ ಬಿದ್ದಿದ್ದಾಳೆ ಎನ್ನಲಾಗಿದೆ. ರಾಣೆಬೆನ್ನೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.