ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ ಸಾಮಾಜಿಕ ಅಂತರ ಪಾಲನೆ; ಲಾಕ್​​ಡೌನ್​​ಗೆ ಉತ್ತಮ ಸ್ಪಂದನೆ - maintaining social distance Haveri

ಮನೆ ಬಿಟ್ಟು ಅನಗತ್ಯವಾಗಿ ಹೊರಗೆ ಓಡಾಡೋರಿಗೆ ದಂಡ ಹಾಕುವ ಪೊಲೀಸರು ವಾಹನ ಸವಾರರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ದಿನಸಿ, ತರಕಾರಿ ಹೊರತುಪಡಿಸಿ ಎಲ್ಲಾ ಅಂಗಡಿಗಳು ವ್ಯಾಪಾರ ಸ್ಥಗಿತಗೊಳಿಸಿವೆ.

Haveri
ಸಾಮಾಜಿಕ ಅಂತರ ಕಾಯ್ದುಕೊಂಡ ವ್ಯಾಪಾರಿಗಳು

By

Published : Apr 13, 2020, 10:14 AM IST

ಹಾವೇರಿ: ಭಾರತ ಲಾಕ್ ಡೌನ್​​ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರಿಗಳು, ಗ್ರಾಹಕರು ತರಕಾರಿ ಮಾರಾಟ ಮತ್ತು ಖರೀದಿ ಮಾಡುತ್ತಿದ್ದ ದೃಶ್ಯ ಕಂಡುಬಂತು.

ಮನೆ ಬಿಟ್ಟು ಅನಗತ್ಯವಾಗಿ ಹೊರಗೆ ಓಡಾಡೋರಿಗೆ ದಂಡ ಹಾಕುವ ಪೊಲೀಸರು ವಾಹನ ಸವಾರರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ದಿನಸಿ, ತರಕಾರಿ ಹೊರತುಪಡಿಸಿ ಎಲ್ಲಾ ಅಂಗಡಿಗಳು ವ್ಯಾಪಾರ ಸ್ಥಗಿತಗೊಳಿಸಿವೆ. ಹೋಲ್‌​ ಸೇಲ್ ತರಕಾರಿ ಮಾರುಕಟ್ಟೆಯಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಲಾಕ್​​ಡೌನ್​​ಗೆ ಉತ್ತಮ ಸ್ಪಂದನೆ

ಹಾಗೆಯೇ ವಿನಾಕಾರಣ ಮನೆಯಿಂದ ಹೊರಗೆ ಬರಬೇಡಿ. ಹೊರಗೆ ಬರಬೇಕಾದ ಅನಿವಾರ್ಯತೆ ಇದ್ದರೆ ಮಾಸ್ಕ್​​​ ಧರಿಸಿ ಬಂದು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಲಾಗುತ್ತಿದೆ.

ABOUT THE AUTHOR

...view details