ರಾಣೆಬೆನ್ನೂರು: ಸರ್ಕಾರದ ಆದೇಶದಂತೆ ರವಿವಾರದ ಲಾಕ್ಡೌನ್ಗೆ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ನಗರ ಸಂಪೂರ್ಣ ಸ್ತಬ್ಧವಾಗಿದೆ.
ಲಾಕ್ಡೌನ್ಗೆ ರಾಣೆಬೆನ್ನೂರಲ್ಲಿ ಉತ್ತಮ ಪ್ರತಿಕ್ರಿಯೆ: ನಗರ ಸಂಪೂರ್ಣ ಸ್ತಬ್ಧ
ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಜಿಲ್ಲೆಯಾದ್ಯಂತ ಇಂದು ನಿಷೇಧಾಜ್ಞೆ ಹೊರಡಿಸಿದ್ದಾರೆ. ಅದರಂತೆ ರಾಣೆಬೆನ್ನೂರಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ನಗರ ಸಂಪೂರ್ಣ ಸ್ತಬ್ಧವಾಗಿದೆ.
ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ
ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಜಿಲ್ಲೆಯಾದ್ಯಂತ ಇಂದು ನಿಷೇಧಾಜ್ಞೆ ಹೊರಡಿಸಿದ್ದರು. ಇದರ ಹಿನ್ನೆಲೆಯಲ್ಲಿ ನಗರದ ಬಹುತೇಕ ಕಡೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ರಸ್ತೆ ಬಿಕೋ ಎನ್ನುತ್ತಿದೆ.
ಲಾಕ್ಡೌನ್ ಶನಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ 5 ರವರೆಗೆ ಇರುವುದರಿಂದ ಮದ್ಯದಂಗಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಪೇಪರ್ ಮತ್ತು ಔಷಧಿ ಅಂಗಡಿಗಳು ಸೇರಿದಂತೆ ತುರ್ತು ಸೇವೆಗಳು ಎಂದಿನಂತೆ ದೊರೆಯುತ್ತಿವೆ.