ಕರ್ನಾಟಕ

karnataka

ETV Bharat / state

ಸಾರಿಗೆ ಬಸ್ ಡಿಕ್ಕಿ: ವೃದ್ಧೆ ಸ್ಥಳದಲ್ಲೇ ಸಾವು - ವೃದ್ಧೆಗೆ ಡಿಕ್ಕಿ ಹೊಡೆದ ಸಾರಿಗೆ ಬಸ್​

ಕೆಎಸ್​ಆರ್​ಟಿಸಿ ಬಸ್ ಗುದ್ದಿದ ಪರಿಣಾಮ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ.

ವೃದ್ಧೆ ಸ್ಥಳದಲ್ಲೇ ಸಾವು
Govt bus collided a old women

By

Published : Dec 21, 2019, 9:47 PM IST

ಹಾವೇರಿ: ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಾನಗಲ್ ತಾಲೂಕಿನ ಉಪ್ಪುಣಸಿ ಗ್ರಾಮದ ನಿವಾಸಿದುರ್ಗಮ್ಮ ಸಾವಕ್ಕನವರ್ ( 65) ಮೃತ ವೃದ್ಧೆ. ದುರ್ಗಮ್ಮ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಬಸ್ ಗುದ್ದಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details