ಹಾವೇರಿ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ಹಿನ್ನೆಲೆ ಹಾವೇರಿ ಜಿಲ್ಲೆಯ 18 ಖಾಸಗಿ ಆಸ್ಪತ್ರೆಗಳಿಗೆ ಕೊರೊನಾ ಚಿಕಿತ್ಸೆ ನೀಡಲು ಸರ್ಕಾರ ಅನುಮತಿ ನೀಡಿದೆ.
ಹಾವೇರಿ ಜಿಲ್ಲೆಯ 18 ಖಾಸಗಿ ಆಸ್ಪತ್ರೆಗಳಿಗೆ ಕೊರೊನಾಗೆ ಚಿಕಿತ್ಸೆ ನೀಡಲು ಸರ್ಕಾರ ಅನುಮತಿ - Govt Permission for private hospitals
ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗಲಾರಂಭಿಸಿದೆ. ಹಾಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಮಾತ್ರ ಸೀಮಿತವಾಗಿದ್ದ ಕೊರೊನಾ ರೋಗಿಗಳ ಚಿಕಿತ್ಸೆಯನ್ನ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೂ ವಿಸ್ತರಿಸಿದೆ.
![ಹಾವೇರಿ ಜಿಲ್ಲೆಯ 18 ಖಾಸಗಿ ಆಸ್ಪತ್ರೆಗಳಿಗೆ ಕೊರೊನಾಗೆ ಚಿಕಿತ್ಸೆ ನೀಡಲು ಸರ್ಕಾರ ಅನುಮತಿ Govt Permission for private hospitals to treat corona](https://etvbharatimages.akamaized.net/etvbharat/prod-images/768-512-7724691-121-7724691-1592827676307.jpg)
ಕೊರೊನಾ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ
ಕೊರೊನಾ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ
ಹಾವೇರಿ ಜಿಲ್ಲಾ ಕೇಂದ್ರದ ಪ್ರಮುಖ 6 ಆಸ್ಪತ್ರೆಗಳಾದ ಶೂಶ್ರೂಷಾ, ವೀರಾಪುರ, ಹೆಗ್ಗೇರಿ, ಮಲ್ನಾಡ್, ಶಿವಜ್ಯೋತಿ ಮತ್ತು ಕಾಂತೇಶ್ ಆಸ್ಪತ್ರೆಗಳಿಗೆ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಸರ್ಕಾರ ಅನುಮತಿ ನೀಡಿದೆ.
ಅಲ್ಲದೇ ಸರ್ಕಾರ ನಿಗದಿಪಡಿಸಿದ ದರದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವಂತೆ ಆದೇಶಿಸಿದೆ.