ಕರ್ನಾಟಕ

karnataka

ETV Bharat / state

ಕಳಪೆ ಬೀಜ ಉತ್ಪಾದನೆ: ಮಾರಾಟ ಕಂಪನಿಗಳ ವಿರುದ್ಧ ಕ್ರಮಕ್ಕೆ ಸೂಚನೆ - kannada news

ಮಳೆಗಾಲ ಆರಂಭವಾಗುತ್ತಲೇ ಕಳಪೆ ಬಿತ್ತನೆ ಬೀಜ ಮಾರಾಟ ಮಾಡಿ ರೈತರಿಗೆ ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕಳಪೆ ಬಿತ್ತನೆ ಬೀಜ ಉತ್ಪಾದನಾ ಹಾಗೂ ಮಾರಾಟ ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ ಸೂಚಿಸಿದರು.

ಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ

By

Published : Jun 4, 2019, 1:10 PM IST

ಹಾವೇರಿ :ರಾಜ್ಯದಲ್ಲಿ ಮಳೆಗಾಲ ಶುರುವಾಗುತ್ತಿದೆ. ಈ ವೇಳೆಕಳಪೆ ಬಿತ್ತನೆ ಬೀಜ ಮಾರಾಟದ ಮೇಲೆ ತೀವ್ರ ನಿಗಾ ವಹಿಸುವಂತೆ ಕೃಷಿ ಅಧಿಕಾರಿಗಳಿಗೆ ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹಾವೇರಿಯಲ್ಲಿ ಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಜಿಲ್ಲೆಯಲ್ಲಿ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಂಥವುಗಳಲ್ಲಿ ಕಳಪೆ ಬಿತ್ತನೆ ಬೀಜ ಮಾರಾಟ ಕೂಡಾ ಒಂದು. ಈ ರೀತಿ ಮಾಡಿ ರೈತರಿಗೆ ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಜೊತೆಗೆ ಪ್ರಕರಣದಲ್ಲಿ ಭಾಗಿಗಳಾಗುವ ಮಾರಾಟಗಾರರು, ಬೀಜ ಉತ್ಪಾದನಾ ಕಂಪನಿಗಳು ಹಾಗೂ ಬೀಜವನ್ನು ಪ್ರಮಾಣಿಕರಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದರು. ಕಳಪೆ ಬಿತ್ತನೆ ಬೀಜ ಉತ್ಪಾದನೆ ಹಾಗೂ ಮಾರಾಟ ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ರು.

ABOUT THE AUTHOR

...view details