ಹಾವೇರಿ: 17 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ರಾಣೆಬೆನ್ನೂರು ನಗರಕ್ಕೆ ಮರಳಿದ ಯೋಧನನ್ನು ಗ್ರಾಮಸ್ಥರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಅದ್ಧೂರಿಯಾಗಿ ಬರಮಾಡಿಕೊಂಡರು.
17 ವರ್ಷ ಸೇವೆ ಸಲ್ಲಿಸಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ - ವೀರ ಯೋಧನ ಮೆರವಣಿಗೆ
ಭಾರತೀಯ ಸೇನೆಯಲ್ಲಿ ಸುಮಾರು 17 ವರ್ಷಗಳ ಕಾಲ ಸೈನಿಕನಾಗಿ ಕರ್ತವ್ಯ ನಿರ್ವಹಿಸಿ, ತವರಿಗೆ ಮರಳಿದ ಯೋಧನನ್ನು ಗ್ರಾಮಸ್ಥರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಅದ್ಧೂರಿಯಾಗಿ ಬರಮಾಡಿಕೊಂಡರು.
ಯೋಧನಿಗೆ ಅದ್ಧೂರಿ ಸ್ವಾಗತ
ರಾಣೆಬೆನ್ನೂರು ತಾಲೂಕಿನ ಹನುಮಾಪುರ ತಾಂಡಾದ ನೂಲೇಶಪ್ಪ ಲಮಾಣಿ ಅವರು ಭಾರತೀಯ ಸೇನೆಯಲ್ಲಿ ಸುಮಾರು 17 ವರ್ಷಗಳ ಕಾಲ ಸೈನಿಕನಾಗಿ ಕರ್ತವ್ಯ ನಿರ್ವಹಿಸಿ, ತವರಿಗೆ ಮರಳಿದ್ದಾರೆ. ಊರಿಗೆ ಮರಳಿ ಬಂದ ವೀರ ಯೋಧನನ್ನು ಗ್ರಾಮಸ್ಥರು ಮೆರವಣಿಗೆ ಮಾಡಿ, ಸನ್ಮಾನಿಸಿದರು. ಜೊತೆಗೆ ರೈತ ಸಂಘಟನೆ, ನಗರಸಭಾ ಸದಸ್ಯರು, ಬಜರಂಗ ದಳ, ಆಟೋ ಚಾಲಕರು ಹೂಮಾಲೆ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು.
ನಿವೃತ್ತ ಯೋಧ ನೂಲೇಶಪ್ಪ ಲಮಾಣಿ ಅವರು ಜಮ್ಮು-ಕಾಶ್ಮೀರ, ದೆಹಲಿ, ಪಂಜಾಬ್ ಸೇರಿದಂತೆ ಹಲವೆಡೆ ಕರ್ತವ್ಯ ನಿರ್ವಹಿಸಿದ್ದಾರೆ.