ಕರ್ನಾಟಕ

karnataka

ETV Bharat / state

ರಂಗೇರಿದ ಹಾನಗಲ್​ ಉಪಚುನಾವಣೆ: ಕೈ, ಕಮಲ ನಾಯಕರ ಮತಬೇಟೆ ಜೋರು - ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಮತಬೇಟೆ

ಹಾನಗಲ್‌ ಉಪಚುನಾವಣೆ ಹಿನ್ನೆಲೆ ಸಿಎಂ ಬೊಮ್ಮಾಯಿ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತ ಸಿದ್ದರಾಮಯ್ಯ ಸಹ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ನಾಯಕರ ವಿರುದ್ಧ ವಾಕ್​ಪ್ರಹಾರ ನಡೆಸಿದರು.

Hanagal by-election campaign by congress and BJP leaders
ರಂಗೇರಿದ ಹಾನಗಲ್​ ಉಪಚುನಾವಣೆರಂಗೇರಿದ ಹಾನಗಲ್​ ಉಪಚುನಾವಣೆ

By

Published : Oct 18, 2021, 7:01 AM IST

ಹಾವೇರಿ: ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು ಬಿಜೆಪಿ, ಕಾಂಗ್ರೆಸ್​ ನಾಯಕರ ಮತಬೇಟೆ ಜೋರಾಗಿದೆ.

ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್​ ಪರ ಮತಯಾಚನೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಮತಬೇಟೆಗಿಳಿದಿದ್ದರು.

ರಂಗೇರಿದ ಹಾನಗಲ್​ ಉಪಚುನಾವಣೆರಂಗೇರಿದ ಹಾನಗಲ್​ ಉಪಚುನಾವಣೆ

ಬೊಮ್ಮಾಯಿ ಹಾನಗಲ್‌ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತ ಸಿದ್ದರಾಮಯ್ಯ ಸಹ ನಾಲ್ಕು ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ನಾಯಕರ ವಿರುದ್ಧ ಹರಹಾಯ್ದರು. ಜಿಲ್ಲೆಯಲ್ಲಿ ತುಂಗಾ ಮೇಲ್ದಂಡೆ ಯೋಜನೆ ಮಾಡಿದ್ದು, ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿ.ಎಂ ಉದಾಸಿಯವರು. ಇದರಿಂದ ಒಂದು ಲಕ್ಷ ಎಕರೆ ಪ್ರದೇಶ ನೀರಾವರಿ ಜಮೀನಾಗಿದೆ ಎಂದರು.

ಮಾಜಿ ಶಾಸಕ ಸಿ.ಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ವಿಧಾನಸಭಾಕ್ಷೇತ್ರದ ಉಪಚುನಾವಣೆ ಮತದಾನ ಇದೇ 30 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ತಮ್ಮ ಪ್ರಚಾರ ಪ್ರಾರಂಭಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಪ್ರಚಾರ ನಡೆಸಿದರು. ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ತೆರೆದ ವಾಹನದಲ್ಲಿ ಅಭ್ಯರ್ಥಿ ಪರ ಮತಯಾಚಿಸಿದರು. ಮಾಸನಕಟ್ಟಿ, ಕಂಚಿನೆಗಳೂರು,ಬೊಮ್ಮನಹಳ್ಳಿ ಮತ್ತು ಮಂತಗಿಯಲ್ಲಿ ಸಿದ್ದರಾಮಯ್ಯ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್​ ನಾಯಕರು ವಿರುದ್ಧ ಹರಿಹಾಯ್ದರು. ಮತದಾರರು ಯಾವ ಆಮಿಷಕ್ಕೆ ಬಲಿಯಾಗದೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು.

ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಕ್ಷೇತ್ರದ ವಿವಿಧೆಡೆ ಮತಬೇಟೆ ನಡೆಸಿದರು. ಎರಡು ರಾಷ್ಟ್ರೀಯ ಪಕ್ಷಗಳು ನಾಡಿನ ಹಿತ ಕಾಪಾಡುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕ್ಷೇತ್ರದ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಇತ್ತ ಬಿಜೆಪಿ ಮುಖಂಡರು, ಸಚಿವರ ದಂಡೇ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ.

ABOUT THE AUTHOR

...view details