ಕರ್ನಾಟಕ

karnataka

ETV Bharat / state

ಹಾನಗಲ್ ಉಪಚುನಾವಣೆ : ಕೊನೆ ದಿನ 20 ಅಭ್ಯರ್ಥಿಗಳಿಂದ 30 ನಾಮಪತ್ರ ಸಲ್ಲಿಕೆ - ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತ್ಯ

ಅ.1ರಿಂದ ಆರಂಭವಾದ ನಾಮಪತ್ರ ಸಲ್ಲಿಕೆ ಶುಕ್ರವಾರದವರೆಗೆ ನಡೆಯಿತು. ಒಟ್ಟು 29 ಅಭ್ಯರ್ಥಿಗಳಿಂದ 45 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಇಂದು ಒಂದೇ ದಿನ 20 ಅಭ್ಯರ್ಥಿಗಳು 30 ನಾಮಪತ್ರ ಸಲ್ಲಿಸಿದ್ದಾರೆ..

Hanagal
ಹಾನಗಲ್

By

Published : Oct 8, 2021, 10:19 PM IST

ಹಾವೇರಿ :ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಅಂತ್ಯಗೊಂಡಿದೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತ್ಯ

ಅ.1ರಿಂದ ಆರಂಭವಾದ ನಾಮಪತ್ರ ಸಲ್ಲಿಕೆ ಶುಕ್ರವಾರದವರೆಗೆ ನಡೆಯಿತು. ಒಟ್ಟು 29 ಅಭ್ಯರ್ಥಿಗಳಿಂದ 45 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಇಂದು ಒಂದೇ ದಿನ 20 ಅಭ್ಯರ್ಥಿಗಳು 30 ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತ್ಯ

ಅ.11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅ.13 ಕೊನೆಯ ದಿನವಾಗಿದೆ. ಕಾಂಗ್ರೆಸ್ಸಿನಿಂದ ಶ್ರೀನಿವಾಸ ಮಾನೆ, ಬಿಜೆಪಿಯ ಶಿವರಾಜ್ ಸಜ್ಜನರ್ ಮತ್ತು ಜೆಡಿಎಸ್‌ನ ನಿಯಾಜ್ ಶೇಖ್ ನಾಮಪತ್ರ ಸಲ್ಲಿಸಿದ್ದಾರೆ. ಅ.30ರಂದು ಮತದಾನ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.

ಜೂನ್ 8 ರಂದು ನಿಧನರಾಗಿದ್ದ ಹಾನಗಲ್ ಕ್ಷೇತ್ರದ ಶಾಸಕ ಸಿ ಎಂ ಉದಾಸಿ ಸ್ಥಾನಕ್ಕೆ ಹಾನಗಲ್ ವಿಧಾನಸಭೆಯಲ್ಲಿ ಉಪಚುನಾವಣೆ ನಡೆಯುತ್ತಿದೆ.

ಇದನ್ನೂ ಓದಿ: ನನ್ನ ನೇತೃತ್ವದಲ್ಲೇ 2023 ರ ಚುನಾವಣೆ: ಸಾಮೂಹಿಕ ನಾಯಕತ್ವದ ಜಪ ಮಾಡುತ್ತಿದ್ದ ನಾಯಕರಿಗೆ ಬೊಮ್ಮಾಯಿ ಶಾಕ್

ABOUT THE AUTHOR

...view details