ಹಾವೇರಿ :ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾವು ರಂಗೇರಲಾರಂಭಿಸಿದೆ. ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಕಾಂಗ್ರೆಸ್ ಬಹಿರಂಗ ಸಮಾವೇಶ ಹಮ್ಮಿಕೊಂಡಿತ್ತು.
ಹಾನಗಲ್ ಉಪಚುನಾವಣೆ : ಕಾಂಗ್ರೆಸ್ನಿಂದ ಬಹಿರಂಗ ಸಮಾವೇಶ - ಹಾನಗಲ್ನಲ್ಲಿ ಕಾಂಗ್ರೆಸ್ನಿಂದ ಬಹಿರಂಗ ಸಮಾವೇಶ
ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಕಾಂಗ್ರೆಸ್ ಹಾನಗಲ್ ತಾಲೂಕಾ ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶ ಹಮ್ಮಿಕೊಂಡಿತ್ತು. ಈ ಸಮಾವೇಶದಲ್ಲಿ ಕಾಂಗ್ರೆಸ್ನ ಪ್ರಮುಖ ನಾಯಕರು ಭಾಗವಹಿಸಿದ್ದರು..
ಕಾಂಗ್ರೆಸ್ನಿಂದ ಬಹಿರಂಗ ಸಮಾವೇಶ
ನಗರದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಸಮಾವೇಶಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಚಾಲನೆ ನೀಡಿದರು. ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್, ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್ ಸೇರಿ ವಿವಿಧ ಮುಖಂಡರು ಪಾಲ್ಗೊಂಡಿದ್ದರು. ಸಭೆಯಲ್ಲಿ ತಮ್ಮ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಮತಯಾಚಿಸಿದರು. ಸಭೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.