ಹಾವೇರಿ :ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ಇಂದು ಪಕ್ಷೇತರ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.
ಹಾನಗಲ್ ಉಪಚುನಾವಣೆ : ಪಕ್ಷೇತರ ಅಭ್ಯರ್ಥಿ ನಾಮಪತ್ರ ಸಲ್ಲಿಕೆ - ಪಕ್ಷೇತರ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 8ರವರೆಗೆ ಅವಕಾಶವಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 13 ಕೊನೆಯ ದಿನವಾಗಿದೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದೆ..
ಸಿದ್ದಪ್ಪ ಪೂಜಾರ ನಾಮಪತ್ರ ಸಲ್ಲಿಕೆ
ಪಕ್ಷೇತರ ಅಭ್ಯರ್ಥಿ ಬೊಮ್ಮನಹಳ್ಳಿಯ ಸಿದ್ದಪ್ಪ ಪೂಜಾರ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿ ಅನ್ನಪೂರ್ಣ ಮುದಕಮ್ಮನವರಿಗೆ ನಾಮಪತ್ರ ಸಲ್ಲಿಸಿದ್ದು, ಇದರಿಂದಾಗಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾದಂತಾಗಿದೆ.
ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 8ರವರೆಗೆ ಅವಕಾಶವಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 13 ಕೊನೆಯ ದಿನವಾಗಿದೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದೆ.