ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ 45 ಜನರಿಗೆ ಕೊರೊನಾ ಸೋಂಕು: ಮೂವರು ಬಲಿ

ಹಾವೇರಿ ಜಿಲ್ಲೆಯಲ್ಲಿಂದು 45 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1889 ಕ್ಕೇರಿದೆ. ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಸೋಮವಾರ 76 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಜಿಲ್ಲಾಸ್ಪತ್ರೆ ಹಾವೇರಿ
ಜಿಲ್ಲಾಸ್ಪತ್ರೆ ಹಾವೇರಿ

By

Published : Aug 10, 2020, 7:56 PM IST

Updated : Aug 10, 2020, 8:31 PM IST

ಹಾವೇರಿ:ಜಿಲ್ಲೆಯಲ್ಲಿ ಇಂದು 45 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತಂತೆ ಹಾವೇರಿ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1889 ಕ್ಕೇರಿದೆ.

ಹಾವೇರಿ ಮತ್ತು ರಾಣೆಬೆನ್ನೂರು ತಾಲೂಕುಗಳಲ್ಲಿ ತಲಾ 9 ಜನರಿಗೆ ಸೋಂಕು ತಗುಲಿದೆ. ಶಿಗ್ಗಾವಿ ಮತ್ತು ಸವಣೂರು ತಾಲೂಕುಗಳಲ್ಲಿ ತಲಾ 7 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಬ್ಯಾಡಗಿ ತಾಲೂಕಿನಲ್ಲಿ 6, ಹಿರೇಕೆರೂರು ತಾಲೂಕಿನಲ್ಲಿ 4 ಮತ್ತು ಹಾನಗಲ್ ತಾಲೂಕಿನಲ್ಲಿ ಮೂರು ಜನರಿಗೆ ಕೊರೊನಾ ದೃಢಪಟ್ಟಿದೆ. ಸೋಮವಾರ ಮೂರು ಮರಣ ಪ್ರಕರಣಗಳನ್ನ ದೃಢಿಕರಿಸಲಾಗಿದ್ದು, ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 39 ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯಕ್ರಿಯೆಯನ್ನ ಕೋವಿಡ್ ನಿಯಮಾವಳಿಯಂತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣನವರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣನವರ

ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಸೋಮವಾರ 76 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್‌ನಿಂದ ಗುಣಮುಖರಾಗಿ 1098 ಜನರು ಮನೆಗೆ ತೆರಳಿದ್ದಾರೆ. 202 ಜನರನ್ನ ಮನೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಉಳಿದಂತೆ 550 ಜನರಲ್ಲಿ ಸಕ್ರಿಯ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣನವರ್ ತಿಳಿಸಿದ್ದಾರೆ.

Last Updated : Aug 10, 2020, 8:31 PM IST

ABOUT THE AUTHOR

...view details