ಹಾವೇರಿ: ಜಿಲ್ಲೆಯಲ್ಲಿ ಇಂದು 157 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 4481ಕ್ಕೆ ಏರಿಕೆಯಾಗಿದೆ.
ಹಾವೇರಿ: 157 ಜನರಲ್ಲಿ ಸೋಂಕು ಪತ್ತೆ: ಕೊರೊನಾಗೆ ಮೂವರು ಬಲಿ - corona Infection to 157 people
ಹಾವೇರಿಯಲ್ಲಿ ಮಂಗಳವಾರ ವಿವಿಧ ಕೋವಿಡ್ ಆಸ್ಪತ್ರೆಗಳಿಂದ 111 ಜನ ಗುಣಮುಖರಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಲ್ಲದೇ 157 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಮಂಗಳವಾರ 111 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲಾಡಳಿತ ಮೂರು ಮರಣಗಳನ್ನು ದೃಢೀಕರಿಸಿದ್ದು, ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 112 ಕ್ಕೇರಿದಂತಾಗಿದೆ. ಬ್ಯಾಡಗಿ ಹಾನಗಲ್ ತಾಲೂಕುಗಳಲ್ಲಿ ತಲಾ 18 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಹಾವೇರಿ ತಾಲೂಕಿನಲ್ಲಿ 20, ಹಿರೇಕೆರೂರು ತಾಲೂಕಿನಲ್ಲಿ 30, ರಾಣೆಬೆನ್ನೂರು ತಾಲೂಕಿನಲ್ಲಿ 53, ಸವಣೂರು ತಾಲೂಕಿನಲ್ಲಿ 06 , ಶಿಗ್ಗಾವಿ ತಾಲೂಕಿನಲ್ಲಿ 10 ಹಾಗೂ ಹೊರಜಿಲ್ಲೆಯ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಜಿಲ್ಲೆಯಲ್ಲಿ 890 ಜನ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 387 ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.