ಹಾವೇರಿ:ಜಿಲ್ಲೆಯಲ್ಲಿ ಸೋಮವಾರ 65 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಕುರಿತಂತೆ ಹಾವೇರಿ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಹಾವೇರಿಯಲ್ಲಿ ಇಂದು 65 ಮಂದಿಗೆ ಸೋಂಕು: 5 ಮಂದಿ ಕೊರೊನಾಗೆ ಬಲಿ
ಹಾವೇರಿ ಜಿಲ್ಲೆಯಲ್ಲಿಂದು 65 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂದು 5 ಜನ ಕೊರೊನಾದಿಂದ ಸಾವನ್ನಪ್ಪಿದ್ದು,857 ಜನರು ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.377 ಜನ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 4324 ಕ್ಕೇರಿದಂತಾಗಿದೆ. ಜಿಲ್ಲೆಯಲ್ಲಿ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಸೋಮವಾರ 103 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲಾಡಳಿತ ಕೊರೊನಾದಿಂದ ಐದು ಸಾವುಗಳನ್ನ ದೃಢೀಕರಿಸಿದೆ. ಬ್ಯಾಡಗಿ ತಾಲೂಕಿನಲ್ಲಿ 07,ಹಾವೇರಿ ತಾಲೂಕಿನಲ್ಲಿ 32, ಹಿರೇಕೆರೂರು ತಾಲೂಕಿನಲ್ಲಿ 12 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಹಾನಗಲ್,ರಾಣೆಬೆನ್ನೂರು ಶಿಗ್ಗಾವಿ ತಾಲೂಕುಗಳಲ್ಲಿ ತಲಾ ನಾಲ್ಕು ಪ್ರಕರಣಗಳು ವರದಿಯಾಗಿದ್ದು ,ಸವಣೂರು ತಾಲೂಕಿನಲ್ಲಿ ಇಬ್ಬರಿಗೆ ಕೊರೊನಾ ವಕ್ಕರಿಸಿದೆ. ಜಿಲ್ಲೆಯಲ್ಲಿ 857 ಜನರು ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 377 ಜನ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.