ಹಾವೇರಿ: ಇದೇ ತಿಂಗಳ 25 ರಿಂದ ಆರಂಭವಾಗಿ ಜುಲೈ 3 ರಂದು ಮುಕ್ತಾಯವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.
SSLC ಪರೀಕ್ಷೆಗೆ ಹಾವೇರಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ - ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ ಹಾವೇರಿ
ಆರೋಗ್ಯ ಇಲಾಖೆ ಮತ್ತು ಬೆಳಗಾವಿ ವಿಭಾಗಾಧಿಕಾರಿಗಳ ಮಾರ್ಗದರ್ಶನಗಳ ಪ್ರಕಾರ, ಎಸ್ಎಸ್ಎಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.
![SSLC ಪರೀಕ್ಷೆಗೆ ಹಾವೇರಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ Haveri](https://etvbharatimages.akamaized.net/etvbharat/prod-images/768-512-7598401-823-7598401-1592035061202.jpg)
ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ
ನಗರದಲ್ಲಿ ಮಾತನಾಡಿದ ಅವರು, ಈ ಕುರಿತಂತೆ ಆರೋಗ್ಯ ಇಲಾಖೆ ಮತ್ತು ಬೆಳಗಾವಿ ವಿಭಾಗಾಧಿಕಾರಿಗಳ ಮಾರ್ಗದರ್ಶನಗಳ ಪ್ರಕಾರ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 75 ಪರೀಕ್ಷಾ ಕೇಂದ್ರಗಳಿದ್ದು 15 ಬ್ಲಾಕ್ ಪರೀಕ್ಷಾ ಕೇಂದ್ರಗಳಿವೆ ಎಂದು ಮಾಹಿತಿ ನೀಡಿದರು.
ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ
ಈ ಬಾರಿ 22,511 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ಕಂಟೈನ್ಮೆಂಟ್ ಪ್ರದೇಶದವರಾಗಿದ್ದು ಅವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ವಿವರಿಸಿದರು.