ಹಾವೇರಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.
ಹಾವೇರಿ: ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ವೈದ್ಯರು - Haveri corona news
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಜಾನಗುಂಡಿಕೊಪ್ಪ ಗ್ರಾಮದ 30 ವರ್ಷದ ಸೋಂಕಿತ ಗರ್ಭಿಣಿಗೆ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ
ಗಂಡು ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಜಾನಗುಂಡಿಕೊಪ್ಪ ಗ್ರಾಮದ 30 ವರ್ಷದ ಮಹಿಳೆ ಜುಲೈ 3ರಂದು ಜಿಲ್ಲಾಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದರು.
ಜುಲೈ 10ರಂದು ಮಹಿಳೆಗೆ ಹೆರಿಗೆ ದಿನಾಂಕ ನೀಡಲಾಗಿತ್ತು. ಆದರೆ ಮಹಿಳೆಗೆ ಸೋಂಕು ದೃಢಪಟ್ಟ ಹಿನ್ನೆಲೆ ಸೋಮವಾರ ಜಿಲ್ಲಾಸ್ಪತ್ರೆಗೆ ಕರೆ ತರಲಾಗಿತ್ತು. ಈ ಸಂದರ್ಭದಲ್ಲಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಂಗಳವಾರ ಮುಂಜಾನೆ ಹೆರಿಗೆಯಾಗಿದೆ.