ರಾಣೆಬೆನ್ನೂರು(ಹಾವೇರಿ):ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು, ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಆರೋಪಿಸಿದ್ದಾರೆ.
ಬೊಮ್ಮಾಯಿ ಕೊರೊನಾ ಸೋಂಕಿತರ ಸಂಖ್ಯೆ ಮುಚ್ಚಿಡುತ್ತಿದ್ದಾರೆ- ರೈತ ಮುಖಂಡ ರವಿಂದ್ರಗೌಡ ಆರೋಪ - haveri former protest
ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಿದೆ. ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ತಮ್ಮ ಸ್ವ-ಪ್ರತಿಷ್ಠೆಯಿಂದ ಕೊರೊನಾ ಸೋಂಕಿತರ ಸಂಖ್ಯೆಯನ್ನು ಮುಚ್ಚಿಡುತ್ತಿದ್ದಾರೆ..
ರಾಣೇಬೆನ್ನೂರು ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಲಾಕ್ಡೌನ್ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ಅವರು, ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಎರಡು ತಿಂಗಳ ಕಾಲ ಜಿಲ್ಲೆ ಸೇರಿ ಎಲ್ಲಾ ತಾಲೂಕುಗಳನ್ನು ಸಂಪೂರ್ಣ ಲಾಕ್ಡೌನ್ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಿದೆ. ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ತಮ್ಮ ಸ್ವ-ಪ್ರತಿಷ್ಠೆಯಿಂದ ಕೊರೊನಾ ಸೋಂಕಿತರ ಸಂಖ್ಯೆಯನ್ನು ಮುಚ್ಚಿಡುತ್ತಿದ್ದಾರೆ. ಕೊರೊನಾ ಹೆಚ್ಚಾಗಲು ಸರ್ಕಾರ ಮತ್ತು ಅಧಿಕಾರಿಗಳು ತೆಗೆದುಕೊಂಡ ಯಡವಟ್ಟಿನ ನಿರ್ಧಾರಗಳೇ ಕಾರಣ ಎಂದು ಆರೋಪಿಸಿದರು.