ಕರ್ನಾಟಕ

karnataka

ETV Bharat / state

ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ಹಾವೇರಿ ಪತ್ರಕರ್ತರಿಂದ ಖಂಡನೆ - ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ

ಬೆಂಗಳೂರು ಗಲಭೆ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಜಿಲ್ಲೆಯ ಪತ್ರಕರ್ತರ ಸಂಘಟನೆಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದವು.

Haveri journalist committee
Haveri journalist committee

By

Published : Aug 12, 2020, 5:35 PM IST

ಹಾವೇರಿ: ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ವೇಳೆ ವರದಿ ಮಾಡಲು ಹೋಗಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವುದಕ್ಕೆ ಜಿಲ್ಲೆಯ ಪತ್ರಕರ್ತರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳು, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು. ಜೊತೆಗೆ ಹಲ್ಲೆ ವೇಳೆ ಗಾಯಗೊಂಡಿರುವ ಮಾಧ್ಯಮ ಪ್ರತಿನಿಧಿಗಳ ಚಿಕಿತ್ಸಾ ವೆಚ್ಚವನ್ನು ಭರಿಸಬೇಕು ಮತ್ತು ಪರಿಹಾರ ನೀಡುವಂತೆ ಆಗ್ರಹಿಸಿದರು. ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಮಿಶ್ರಾಗೆ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details